ಭೋಪಾಲ್ : ಕಳೆದ ಫೆಬ್ರವರಿ ತಿಂಗಳಲ್ಲಿ ದಕ್ಷಿಣ ಆಫ್ರಿಕಾದಿಂದ ತರಿಸಿದ್ದ 12 ಚೀತಾಗಳ ಪೈಕಿ ಒಂದು ಚೀತಾ ಭಾನುವಾರ ಸಾವನ್ನಪ್ಪಿದೆ. ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಪರಿಚಯಿಸಲಾಗಿದ್ದ 8 ಚೀತಾಗಳ ಪೈಕಿ, ಕಿಡ್ನಿ ಸೋಂಕಿನಿಂದ ಬಳಲುತ್ತಿದ್ದ ಸಾಶಾ ಹೆಸರಿನ 3 ವರ್ಷದ ಹೆಣ್ಣು ಚೀತಾ ಮಾರ್ಚ್ ತಿಂಗಳಲ್ಲಿ ಮೃತಪಟ್ಟಿತ್ತು.ಇದೀಗ ಫೆಬ್ರವರಿ ತಿಂಗಳಲ್ಲಿ ದಕ್ಷಿಣ ಆಫ್ರಿಕಾದಿಂದ ತರಿಸಲಾಗಿದ್ದ ಉದಯ್ ಹೆಸರಿನ ಗಂಡು ಚೀತಾ ಅನಾರೋಗ್ಯದಿಂದ ಸಾವನ್ನಪ್ಪಿದೆ ಎಂದು ಮಧ್ಯಪ್ರದೇಶದ ಮುಖ್ಯ ಅರಣ್ಯ