ಗಾಂಧೀನಗರ : ಕ್ರಿಕೆಟ್ ಆಡುತ್ತಿದ್ದ ಸಂದರ್ಭ ದಲಿತ ಬಾಲಕನೊಬ್ಬ ಚೆಂಡನ್ನು ಮುಟ್ಟಿದ್ದಕ್ಕೆ ಗಲಾಟೆ ನಡೆದು, ಇದನ್ನು ಪ್ರಶ್ನಿಸಿದ ದಲಿತ ವ್ಯಕ್ತಿಯ ಹೆಬ್ಬೆರಳನ್ನೇ ಕತ್ತರಿಸಿರುವ ವಿಕೃತ ಘಟನೆ ಗುಜರಾತ್ನಲ್ಲಿ ನಡೆದಿದೆ. ಗುಜರಾತ್ನ ಪಟಾನ್ ಜಿಲ್ಲೆಯ ಗ್ರಾಮಸ್ಥರು ಭಾನುವಾರ ಶಾಲೆಯೊಂದರ ಆಟದ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ದಲಿತ ಬಾಲಕನೊಬ್ಬ ಚೆಂಡನ್ನು ಮುಟ್ಟಿದ್ದ. ಇದರಿಂದ ಕೋಪಗೊಂಡ ಗ್ರಾಮಸ್ಥರು ಬಾಲಕನಿಗೆ ಜಾತಿ ನಿಂದನೆ ಮಾಡಿದ್ದಲ್ಲದೇ ಬೆದರಿಕೆ ಹಾಕಿದ್ದಾರೆ.ಈ ವಿಚಾರ ತಿಳಿದ ಬಾಲಕನ