ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಗ್ಗೆ ಕೆಪಿಸಿಸಿ ಸಾಮಾಜಿಕ ಜಾಲತಾಣದಿಂದ ಮಾಡಲಾಗಿರುವ ಅವಹೇಳನಕಾರಿ ಟ್ವೀಟ್ ಬಗ್ಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ. ತಕ್ಷಣ ಈ ಟ್ವೀಟ್ ತೆಗೆದುಹಾಕಲು ಸೂಚನೆ ನೀಡಲಾಗಿದೆ. ಈ ಅಚಾತುರ್ಯಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಕಾಂಗ್ರೆಸ್ ಇಂತಹ ಪ್ರಮಾದವನ್ನು ಎಂದಿಗೂ ಸಹಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಕರ್ನಾಟಕ