ಚೆನ್ನೈ : ಮದುವೆ ವಿಚಾರದಲ್ಲಿ ತಂದೆ ಹಾಗೂ ಮಗನ ನಡುವೆ ನಡೆದ ಗಲಾಟೆ ತಾರಕಕ್ಕೇರಿ ಪುತ್ರನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.ಶಿವಮಣಿ(30) ತಂದೆಯಿಂದಲೇ ಕೊಲೆಯಾದ ಯುವಕ. ಪಾನಮತ್ತರಾಗಿದ್ದ ತಂದೆ-ಮಗ ಮದುವೆ ವಿಚಾರದಲ್ಲಿ ವಾಗ್ವಾದ ನಡೆದಿದೆ. ಇದೇ ಕೊಲೆಗೆ ಕಾರಣ ಎನ್ನಲಾಗಿದೆ.ಶಿವಮಣಿಗೆ ಇಬ್ಬರು ಸಹೋದರಿಯರಿದ್ದು ಅವರಿಬ್ಬರ ಮದುವೆಯಾಗಿತ್ತು. ಇದೀಗ ತನಗೆ ಮದುವೆ ಮಾಡಿಸುವ ವಿಚಾರದಲ್ಲಿ ಮನೆಯವರು ಅಸಡ್ಡೆ ತೋರುತ್ತಿದ್ದಾರೆ ಎಂದು ಶಿವಮಣಿ ಕ್ಯಾತೆ ತೆಗೆದಿದ್ದಾನೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ