ನವದೆಹಲಿ : ಪಕ್ಕದ ಮನೆಯ ವ್ಯಕ್ತಿಯೊಬ್ಬ ಯಾರು ಇಲ್ಲದ ಸಂದರ್ಭದಲ್ಲಿ 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಈಶಾನ್ಯ ದೆಹಲಿಯಲ್ಲಿ ನಡೆದಿದೆ. ಸಂತ್ರಸ್ತೆ ಹಾಗೂ ಆರೋಪಿಯ 2 ಕುಟುಂಬಗಳು ಒಂದೇ ಕಟ್ಟಡದಲ್ಲಿ ವಾಸಿಸುತ್ತಿದ್ದರು. ಜೊತೆಗೆ 2 ಕುಟುಂಬಗಳು ಕೂಲಿ ಕೆಲಸವನ್ನು ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.ಆರೋಪಿಯು ಬಾಲಕಿಯು ಒಬ್ಬಂಟಿಯಾಗಿ ನೋಡಿದ ನಂತರ ಅವಳೊಂದಿಗೆ ಅನುಚಿತವಾಗಿ ವರ್ತಿಸಿ ಅತ್ಯಾಚಾರ ಎಸಗಿದ್ದಾನೆ. ಈ ಕುರಿತು ಸಂತ್ರಸ್ತೆಯ ತಾಯಿಯು ಪೊಲೀಸರಿಗೆ ದೂರು ನೀಡಿದ್ದಾರೆ.