ಲಕ್ನೋ : ತೋಟದಿಂದ ಸೀಬೆ ಹಣ್ಣನ್ನು ಕಿತ್ತಿದ್ದಕ್ಕೆ ದಲಿತ ವ್ಯಕ್ತಿಯನ್ನು ದೊಣ್ಣೆಯಿಂದ ಹೊಡೆದು ಕೊಂದಿರುವ ಹೃದಯವಿದ್ರಾವಕ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ.ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿರುವ ವ್ಯಕ್ತಿ ಓಂ ಪ್ರಕಾಶ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಅವರ ಸಹೋದರ ಸತ್ಯ ಪ್ರಕಾಶ್ ಪೊಲೀಸರಿಗೆ ದೂರು ನೀಡಿದ್ದಾರೆ.ನನ್ನ ಸಹೋದರ ಹಸಿವನ್ನು ತಣಿಸಿಕೊಳ್ಳಲು ಹೊರಗಡೆ ಹೋಗಿದ್ದ. ಆತ ಇತರರ ತೋಟದಿಂದ ಒಂದು ಸೀಬೆ ಹಣ್ಣನ್ನು ಕಿತ್ತು