ಒಡಿಶಾ : ಅಪ್ರಾಪ್ತ ವಿದ್ಯಾರ್ಥಿಯೊಬ್ಬ ತನ್ನ ತರಗತಿಯ ಸಹಪಾಠಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ಘಟನೆ ಒಡಿಶಾದ ಮಯೂರ್ಭಂಜ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. ಸಂತ್ರಸ್ತ ವಿದ್ಯಾರ್ಥಿನಿ 6ನೇ ತರಗತಿಯಲ್ಲಿ ಕಲಿಯುತ್ತಿದ್ದು, ಆಕೆಯನ್ನು ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಆಕೆ 6 ತಿಂಗಳ ಗರ್ಭಿಣಿ ಎಂಬುದು ಬೆಳಕಿಗೆ ಬಂದಿದೆ. ಈ ಬಗ್ಗೆ ಆಕೆಯ ಬಳಿ ವಿಚಾರಿಸಿದಾಗ ತನ್ನ ತರಗತಿಯ ಸಹಪಾಠಿಯೇ ಅತ್ಯಾಚಾರ ಮಾಡಿರುವ ವಿಷಯವನ್ನು ವಿದ್ಯಾರ್ಥಿನಿ ಬಹಿರಂಗಪಡಿಸಿದ್ದಾಳೆ.