ನವದೆಹಲಿ : ಅಗ್ನಿಪಥ್ ವಿರೋಧದ ನಡುವೆಯೇ ಕೇಂದ್ರ ಗೃಹ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅಗ್ನಿವೀರರಿಗೆ ಶೇ. 10ರಷ್ಟು ಮೀಸಲಾತಿ ನೀಡಲು ನಿರ್ಧರಿಸಿದೆ.ಅಗ್ನಿಪಥ್ ವಿರೋಧಿಸಿ ಈಗಾಗಲೇ ದೇಶದ್ಯಾಂತ ಪ್ರತಿಭಟನೆ ನಡೆಯುತ್ತಿದೆ. ಉತ್ತರಪ್ರದೇಶ, ಬಿಹಾರ ಹಾಗೂ ತೆಲಂಗಾಣಗಳಲ್ಲಿ ಪ್ರತಿಭಟನೆಯೂ ಹಿಂಸಾತ್ಮಕಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ರೈಲು ಬೋಗಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಈ ನಡುವೆ ಕೇಂದ್ರ ಗೃಹ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಇಲಾಖೆ, ಅಗ್ನಿವೀರರಿಗೆ 10%