ಲಕ್ನೋ : ಸರ್ಕಾರಿ ಶಾಲೆಯೊಂದರ ಪ್ರಾಂಶುಪಾಲನೇ 17 ವರ್ಷದ ವಿದ್ಯಾರ್ಥಿನಿಗೆ ಮಾದಕ ವಸ್ತು ನೀಡಿ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ವರದಿಗಳ ಪ್ರಕಾರ ನವೆಂಬರ್ 23ರಂದು ಪ್ರಾಂಶುಪಾಲ ಶಾಲೆಯ ಒಟ್ಟು 9 ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದ. ಅಂದು ರಾತ್ರಿ ವೇಳೆ ತಂಗಲು 2 ಹೋಟೆಲ್ ಕೊಠಡಿಗಳನ್ನು ತೆಗೆದುಕೊಂಡಿದ್ದು, ಒಂದು ಕೊಠಡಿಯಲ್ಲಿ 8 ವಿದ್ಯಾರ್ಥಿಗಳನ್ನಿರಿಸಿದ್ದ.ಇನ್ನೊಂದು ಕೊಠಡಿಯಲ್ಲಿ ಪ್ರಾಂಶುಪಾಲ 11ನೇ ತರಗತಿಯ ವಿದ್ಯಾರ್ಥಿನಿಯೊಂದಿಗೆ ಉಳಿದುಕೊಂಡಿದ್ದ ಎನ್ನಲಾಗಿದೆ.ಪ್ರಾಂಶುಪಾಲ