ನವದೆಹಲಿ: ಶೀಘ್ರವೇ ಮತದಾನಕ್ಕೂ ಆಧಾರ್ ಕಾರ್ಡನ್ನು ಏಕೈಕ ಗುರುತು ಪತ್ರವಾಗಿ ಬಳಸಬಹುದು ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎಸ್.ಕೃಷ್ಣಮೂರ್ತಿ ಹೇಳಿದ್ದಾರೆ. ಮತದಾನಕ್ಕೆ ವೋಟರ್ ಐಡಿ ಇಲ್ಲದೆ ಇದ್ದ ಸಂದರ್ಭದಲ್ಲಿ ಪಾಸ್ ಪೋರ್ಟ್, ಡ್ರೈವಿಂಗ್ ಲೈಸನ್ಸ್ಸ ಸೇರಿದಂತೆ ಪರ್ಯಾಯವಾಗಿ ಬೇರೆ ದಾಖಲೆಗಳನ್ನು ಬಳಸುತ್ತಿದ್ದೇವೆ. ಇದು ಹಲವು ಬಗೆಯ ತೊಂದರೆ, ಗೊಂದಲಗಳಿಗೆ ಕಾರಣವಾಗಿದೆ. ಹೀಗಾಗಿ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಮತದಾನಕ್ಕೆ ಒಂದೇ ಗುರುತು ಪತ್ರ ಬಳಸುವುದು ಒಳಿತು. ಇದಕ್ಕೆ ಪರ್ಯಾಯವಾಗಿ ಆಧಾರ್ ಕಾರ್ಡ್ ವ್ಯವಸ್ಥೆ