ಯುವಸೇನೆಯ ಮುಖ್ಯಸ್ಥ ಆದಿತ್ಯ ಠಾಕ್ರೆ ಪ್ರಯಾಣಿಸುತ್ತಿದ್ದ ಕಾರ್ಗೆ ವೇಗದಿಂದ ಬರುತ್ತಿದ್ದ ಮತ್ತೊಂದು ವಾಹನ ಡಿಕ್ಕಿ ಹೊಡೆದ ಘಟನೆ ಮುಂಬೈನಲ್ಲಿ ನಡೆದಿದೆ. ಬಾಂದ್ರಾದಲ್ಲಿರುವ ಠಾಕ್ರೆ ನಿವಾಸದ ಬಳಿಯಲ್ಲೇ ಈ ದುರ್ಘಟನೆ ನಡೆದಿದ್ದು ಅದೃಷ್ಟವಶಾತ್ ಆದಿತ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.