ನವದೆಹಲಿ: ಆಮ್ ಆದ್ಮಿ ಪಕ್ಷದಲ್ಲಿ ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಸೋತ ಮೇಲೆ ಎಲ್ಲವೂ ಸರಿಯಿಲ್ಲ ಎನ್ನುವುದು ಬಹಿರಂಗವಾಗಿದೆ. ನಾಯಕತ್ವದ ವಿರುದ್ಧ ಕುಮಾರ್ ವಿಶ್ವಾಸ್ ತಿರುಗಿಬಿದ್ದಿದ್ದಾರೆ. ತನ್ನ ವಿರುದ್ಧ ಪಕ್ಷದ ನಾಯಕರೇ ಕುತಂತ್ರ ನಡೆಸುತ್ತಿದ್ದಾರೆಂದು ವಿಶ್ವಾಸ್ ಆರೋಪ ಮಾಡಿದ್ದು, ಪಕ್ಷ ಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ ಸದ್ಯದಲ್ಲೇ ತನ್ನ ಮುಂದಿನ ರಾಜಕೀಯ ನಡೆ ಬಗ್ಗೆ ನಿರ್ಧಾರ ಮಾಡುವುದಾಗಿ ಎಚ್ಚರಿಸಿದ್ದಾರೆ.ವಿಶ್ವಾಸ್ ಎಚ್ಚರಿಕೆ ಬೆನ್ನಲ್ಲೇ ಎಚ್ಚೆತ್ತುಕೊಂಡ ಸಿಎಂ ಕೇಜ್ರಿವಾಲ್ ಅವರನ್ನು ಸಮಾಧಾನಿಸುವ