ಕೋಲ್ಕತ್ತಾ : 2 ಗೂಡ್ಸ್ ರೈಲುಗಳ ನಡುವೆ ಡಿಕ್ಕಿಯಾದ ಪರಿಣಾಮ ರೈಲಿನ ಹಲವು ಬೋಗಿಗಳು ಹಳಿ ತಪ್ಪಿದ ಘಟನೆ ಪಶ್ಚಿಮ ಬಂಗಾಳದ ಬಂಕುರಾದಲ್ಲಿ ನಡೆದಿದೆ. ಭಾನುವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಒಂದು ಗೂಡ್ಸ್ ರೈಲಿನ ಹಿಂಬದಿಗೆ ಇನ್ನೊಂದು ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಘಟನೆಯಿಂದ ರೈಲಿನ 12 ಬೋಗಿಗಳು ಹಳಿತಪ್ಪಿವೆ. ಈ ರೈಲು ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಒಂದು ಗೂಡ್ಸ್ ರೈಲಿನ ಡ್ರೈವರ್ಗೆ ಅಪಘಾತದಿಂದ