ತುಮಕೂರು : ಬಿಟ್ ಕಾಯಿನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತನಿಖೆಗೆ ಆದೇಶಿಸಿದ್ದಾರೆ. ಯಾರೇ ತಪ್ಪು ಮಾಡಿದ್ರೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಆಗುತ್ತದೆ ಎಂದು ತುಮಕೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು (ನವೆಂಬರ್ 12) ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಂದು ನಾನು ಹೇಳುವುದಿಲ್ಲ. ಬಿಟ್ ಕಾಯಿನ್ ಪ್ರಕರಣ ಪ್ರಧಾನಿ ಗಮನಕ್ಕೂ ಬಂದಿದೆ. ಖಂಡಿತ ಇದು ಪ್ರಮುಖ ವಿಚಾರ. ಈ