ನವದೆಹಲಿ: ರೈತ ಗಲಭೆ ವೇಳೆ ದೆಹಲಿಯ ಕೆಂಪು ಕೋಟೆಯಲ್ಲಿ ಸಿಖ್ ಧ್ವಜಾರೋಹಣ ಮಾಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಪಂಜಾಬಿ ನಟ, ಕಾರ್ಯಕರ್ತ ದೀಪ್ ಸಿಧು ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ.ಗಣರಾಜ್ಯೋತ್ಸವದಂದು ಕೆಂಪು ಕೋಟೆಯಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ದೀಪ್ ಸಿಧು ಕುಂಡ್ಲಿ-ಮನೇಸರ್ ಪಲ್ವಾಲ್ ಎಕ್ಸ್ ಪ್ರೆಸ್ ವೇನಲ್ಲಿ ನಡೆದ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ನಿನ್ನೆ ರಾತ್ರಿ 9.30 ರ ಸುಮಾರಿಗೆ ದೀಪ್ ಸಿಧು ಕಾರು ಟ್ರಕ್ ಗೆ ಡಿಕ್ಕಿ ಹೊಡೆದಿದೆ.ಪರಿಣಾಮ