ಬೆಂಗಳೂರು: ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಮಾಡಿದ ಟ್ವೀಟ್ ಒಂದು ಈಗ ವಿವಾದಕ್ಕೆ ಕಾರಣವಾಗುವ ಲಕ್ಷಣ ತೋರಿದೆ. ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣವನ್ನು ನಿಭಾಯಿಸುತ್ತಿರುವ ರಮ್ಯಾ, ಗುಜರಾತ್ ನಲ್ಲಿ ರಾಹುಲ್ ಗಾಂಧಿ ಕಾರಿನ ಮೇಲೆ ನಡೆದ ಕಲ್ಲು ತೂರಾಟದ ಬಗ್ಗೆ ಪ್ರತಿಕ್ರಿಯಿಸುವಾಗ ಎಡವಟ್ಟು ಮಾಡಿದ್ದಾರೆ.ಘಟನೆ ಬಗ್ಗೆ ಟ್ವೀಟ್ ಮಾಡಿದ್ದ ಗುಜರಾತ್ ಸಿಎಂ ವಿಜಯ್ ರೂಪಾನಿ ಕಾಂಗ್ರೆಸ್ ನ ಇಂತಹ ನಾಟಕಗಳ ಬಗ್ಗೆ ಜನರಿಗೆ ಚೆನ್ನಾಗಿ ಗೊತ್ತು ಎಂದಿದ್ದರು.