ಅಮರಾವತಿ : ಚಂದ್ರಯಾನ ಯಶಸ್ಸಿನ ಬಳಿಕ ಇಸ್ರೋ ಈಗ ಸೂರ್ಯನ ಅಧ್ಯಯನಕ್ಕೆ ಮುಂದಾಗಿದೆ. ಆದಿತ್ಯ ಎಲ್-1 ಪ್ರಯೋಗಕ್ಕೆ ವೇದಿಕೆ ಸಜ್ಜಾಗಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಅಂತರಿಕ್ಷ ಕೇಂದ್ರದಲ್ಲಿ ಇಂದು ಬೆಳಗ್ಗೆ 11.50ಕ್ಕೆ ಸರಿಯಾಗಿ ಆದಿತ್ಯ ಎಲ್1 ಹೊತ್ತ ಪಿಎಸ್ಎಲ್ವಿ-ಸಿ57 ರಾಕೆಟ್ ನಭಕ್ಕೆ ಚಿಮ್ಮಲಿದೆ. ಈ ಪ್ರಯೋಗದ ಹಿನ್ನೆಲೆಯಲ್ಲಿ ಶುಕ್ರವಾರ ಆದಿತ್ಯ ಎಲ್1 ಆಕೃತಿ ಹೊತ್ತ ಇಸ್ರೋ ವಿಜ್ಞಾನಿಗಳ ತಂಡ ತಿರುಮಲ ತಿಮ್ಮಪ್ಪನನ್ನು ದರ್ಶಿಸಿದೆ. ಸೂಳ್ಳೂರುಪೇಟೆಯ ಚೆಂಗಲಮ್ಮ ಪರಮೇಶ್ವರಿ ಸನ್ನಿಧಿಯಲ್ಲೂ