ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದ ಸಾಮೂಹಿಕ ಲೈಂಗಿಕ ದೌರ್ಜನ್ಯ ಮತ್ತು ಕಮ್ಮನಹಳ್ಳಿಯಲ್ಲಿ ನಡೆದ ದುಷ್ಕೃತ್ಯಕ್ಕೆ ದೇಶಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ. ಆದರೆ ನಗರದಲ್ಲಿ ಅಂತಹ ಘಟನೆಗಳು ಮರುಕಳಿಸುತ್ತಲೇ ಇವೆ. ಇಂದು ಮುಂಜಾನೆ ಕೆ. ಜಿ ಹಳ್ಳಿಯಲ್ಲಿ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಹೇಯ ಘಟನೆ ವರದಿಯಾಗಿದೆ. ನಸುಕಿನ ಜಾವ 6.30ರ ಸುಮಾರಿಗೆ ಈ ಕೃತ್ಯ ನಡೆದಿದ್ದು, ಬಸ್ ಹತ್ತಲು ತೆರಳುತ್ತಿದ್ದ ಯುವತಿಯನ್ನು ಅಡ್ಡಗಟ್ಟಿದ ಕಾಮುಕ ಆಕೆಯ ತುಟಿಗೆ