ನವದೆಹಲಿ: ಬಿಜೆಪಿಯ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಹೇಳಲಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರ ವಿರುದ್ಧ ತನ್ನದೇ ಆದ ಪಡೆ ಸೃಷ್ಟಿಸುವ ಪ್ರಸ್ತಾಪವನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸುತ್ತಿದೆ. ದೇಶಾದ್ಯಂತ ಪ್ರತಿ ಬ್ಲಾಕ್ ಹಂತದಲ್ಲಿ ಸಂಘ ವಿರೋಧಿ ಕಾರ್ಯಕರ್ತರನ್ನು ನೇಮಕ ಮಾಡುವ ಮೂಲಕ ಆರ್ಎಸ್ಎಸ್ ಕಾರ್ಯಕರ್ತರ ತಂತ್ರವನ್ನು ನಿಷ್ಫಲಗೊಳಿಸಲು ಕಾಂಗ್ರೆಸ್ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ನೇತೃತ್ವದ ಸಾಮಾಜಿಕ ನ್ಯಾಯ ಸಮಿತಿ ಪಕ್ಷದ