ಲಕ್ನೋ : ಅಗ್ನಿಪಥ್ ಯೋಜನೆಯ ವಿರುದ್ಧ ಉತ್ತರ ಪ್ರದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಹಲವಾರು ಸ್ಥಳಗಳಲ್ಲಿ ರೈಲುಗಳಿಗೆ ಬೆಂಕಿ ಹಚ್ಚಲಾಗಿದೆ. ಸಾರ್ವಜನಿಕ ಆಸ್ತಿಯನ್ನು ಧ್ವಂಸಗೊಳಿಸಲಾಗಿದೆ.ಉತ್ತರ ಪ್ರದೇಶದಲ್ಲಿ ಇಂತಹ ಹಿಂಸಾತ್ಮಕ ಕೃತ್ಯಗಳಲ್ಲಿ ತೊಡಗಿದ್ದವರ ಮನೆಗಳನ್ನು ಬುಲ್ಡೋಜರ್ಗಳಿಂದ ಧ್ವಂಸಗೊಳಿಸಿ ಯೋಗಿ ಸರ್ಕಾರ ಈಗಾಗಲೇ ಬಿಸಿ ಮುಟ್ಟಿಸಿತ್ತು.ಈ ಬಾರಿ ವಾರಣಾಸಿ ಆಡಳಿತ ಒಂದು ಹೆಜ್ಜೆ ಮುಂದೆ ಹೋಗಿ, ಪ್ರತಿಭಟನೆಯ ಹೆಸರಿನಲ್ಲಿ ಸರ್ಕಾರಿ ಆಸ್ತಿಯನ್ನು ನಾಶಪಡಿಸಿದವರಿಂದ ಪರಿಹಾರವನ್ನು ವಸೂಲಿ ಮಾಡುವುದಾಗಿ ಹೇಳಿದೆ. ವಾರಣಾಸಿ ಆಡಳಿತ ಅಗ್ನಿಪಥ್ ವಿರೋಧಿ