ನವದೆಹಲಿ : ಅಗ್ನಿಪಥ್ ಯೋಜನೆಯಡಿ ಕರ್ನಾಟಕದಲ್ಲಿ ನವೆಂಬರ್ 1ರಿಂದ 3ರವರೆಗೆ ಮಿಲಿಟರಿ ಪೊಲೀಸರ ಸಾಮಾನ್ಯ ಕರ್ತವ್ಯ ವರ್ಗದ ಮಹಿಳಾ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಈ ನೇಮಕಾತಿ ಪ್ರಕ್ರಿಯೆಯು ಪ್ರಧಾನ ಕಛೇರಿ ನೇಮಕಾತಿ ವಲಯದ ಆಶ್ರಯದಲ್ಲಿ ಬೆಂಗಳೂರಿನ ಮಾಣಿಕ್ಷಾ ಪರೇಡ್ ಮೈದಾನದಲ್ಲಿ ನಡೆಯಲಿದೆ ರಕ್ಷಣಾ ಇಲಾಖೆ ತಿಳಿಸಿದೆ. ಕರ್ನಾಟಕ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪ ಮತ್ತು ಮಾಹೆಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸುವವರು 17 ವರ್ಷ