ಅಣ್ಣಾಡಿಎಂಕೆಯ ಎರಡು ಎಲೆ ಚಿಹ್ನೆಗಾಗಿ ಚುನಾವಣಾ ಆಯೋಗಕ್ಕೆ 50 ಕೋಟಿ ರೂ. ಲಂಚದ ಆಮಿಶವಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಣ್ಣಾಡಿಎಂಕೆ ಮುಖಂಡ ಟಿಟಿವಿ ದಿನಕರನ್ ವಿರುದ್ಧದ ತನಿಖೆಯನ್ನ ದೆಹಲಿ ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದಾರೆ.