ಮಧುರೈ : ತಮಿಳುನಾಡಿನ ಆಡಳಿತಾರೂಢ ಪಕ್ಷದ ಶಾಸಕ ಎ.ಕೆ.ಬೋಸ್ ಅನಾರೋಗ್ಯದಿಂದಾಗಿ ಬುಧವಾರ ತಡರಾತ್ರಿ ಮಧುರೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲ ವರ್ಷಗಳ ಹಿಂದಿನಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ಎ.ಕೆ. ಬೋಸ್ ಅವರನ್ನು ಕೆಲ ದಿನಗಳ ಹಿಂದೆ ಮಧುರೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ತಡರಾತ್ರಿ ಬೋಸ್ ಕೊನೆಯುಸಿರೆಳೆದಿದ್ದಾರೆ. ಇವರು ತಮ್ಮ ಪತ್ನಿ ಹಾಗೂ ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಎಐಎಡಿಎಂಕೆ ಪಕ್ಷದ ಯುವ ಘಟಕದ ನಾಯಕನಾಗಿ