ನವದೆಹಲಿ: ಭಾರತೀಯ ವಾಯುಸೇನೆಗೆ ಸೇರಿದ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ತವಾಂಗ್ ಬಳಿ ಅಪಘಾತಕ್ಕೀಡಾಗಿದ್ದು ಆರು ಯೋಧರು ದುರ್ಮರಣಕ್ಕೀಡಾಗಿದ್ದಾರೆ. 7 ಜನ ಯೋಧರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತವಾಂಗ್ ಬಳಿ ಪತನವಾಗಿದೆ. ಬೆಳಿಗ್ಗೆ 6.30 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ವಾಯುಸೇನೆಗೆ ಸೇರಿದ ಎಂ 17 ವಿ5 ಹೆಲಿಕಾಪ್ಟರ್ ದುರ್ಘಟನೆಗೀಡಾಗಿರುವುದು.ಹೆಲಿಕಾಪ್ಟರ್ ನಲ್ಲಿ ಒಟ್ಟು ಏಳು ಮಂದಿ ಯೋಧರಿದ್ದರು. ಇವರ ಪೈಕಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನೋರ್ವ ಯೋಧನಿಗೆ ಗಂಭೀರ