ಚೆನ್ನೈ : ಮಗಳು ಕೆಳಜಾತಿಯ ಯುವಕನನ್ನು ಮದುವೆಯಾಗಿದ್ದಾಳೆ ಎನ್ನುವ ಅವಮಾನ ತಾಳಲಾರದೆ ತಂದೆ ಮನೆಯವರನ್ನೆಲ್ಲ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ ನಡೆದಿದೆ.ಟೀ ಅಂಗಡಿ ನಡೆಸುತ್ತಿದ್ದ ಲಕ್ಷ್ಮಣನ್ ತನ್ನ ಹಿರಿಯ ಮಗಳು ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ಮದುವೆಯಾಗಿದ್ದಕ್ಕಾಗಿ ಮನನೊಂದಿದ್ದರು. ಹೀಗಾಗಿ ಅವರು ತಮ್ಮ ಹೆಂಡತಿ, ಮಕ್ಕಳನ್ನು ಕೊಂದು, ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮನೆಯವರ ವಿರೋಧದ ನಡುವೆ ಮದುವೆಯಾಗಿದ್ದ ಅವರ ಮಗಳು ಈಗ ಪತಿಯೊಂದಿಗೆ ವಾಸಿಸುತ್ತಿದ್ದು, ಸುರಕ್ಷಿತವಾಗಿದ್ದಾರೆ ಎಂದಿದ್ದಾರೆ