ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಕೈಜೋಡಿಸುತ್ತೇವೆ ಎಂದು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಪಕ್ಷದ ಸಂಸದಿಯ ಸಭೆಯಲ್ಲಿ ಮಾತನಾಡಿದ ಅವರು, ರಾಜಕೀಯ ಲಾಭ ಪಡೆಯುವ ಸಲುವಾಗಿ ಕೇಂದ್ರ ಸರ್ಕಾರ ಸಮಾಜದಲ್ಲಿ ಗೊಂದಲ ಸೃಷ್ಠಿ ಮಾಡುತ್ತಿದೆ. ಅಲ್ಪಸಂಖ್ಯಾತರ ಮೇಲೆ ಹಿಂಸೆಯನ್ನು ಪ್ರಚೋದಿಸುತ್ತಿದೆ. ಕೆಲವೇ ತಿಂಗಳಲ್ಲಿ ಚುನಾವಣೆ ನಡೆಯಲಿರುವ ಕರ್ನಾಟಕದಲ್ಲಿ ಕೂಡ ಇದೇ ರೀತಿ ಮಾಡಲಿದೆ ಎಂದಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ