ನವದೆಹಲಿ: ಸಿಬಿಐ ನಿರ್ದೇಶಕ ಸ್ಥಾನದಿಂದ ಅಲೋಕ್ ವರ್ಮಾ ಅವರನ್ನು ಉಚ್ಛಾಟಿಸಲಾಗಿದೆ. ಮೋದಿ ನೇತೃತ್ವದ ಆಯ್ಕೆ ಸಮಿತಿ ಈಗ ಅಲೋಕ್ ವರ್ಮಾ ಅವರ ಬದಲಿಗೆ ಸಿಬಿಐ ನೂತನ ನಿರ್ದೇಶಕರನ್ನಾಗಿ ನಾಗೇಶ್ವರ್ ರಾವ್ ಅವರನ್ನೇ ಮುಂದುವರಿಸಲು ನಿರ್ಣಯ ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಕಿ. ಸಿಕ್ರಿ., ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇರುವ ಉನ್ನತಾಧಿಕಾರ ಸಮಿತಿ ಗುರುವಾರ ರಾತ್ರಿ ಸಭೆ ನಡೆಸಿ ಈ ನಿರ್ಧಾರ ಕೈಗೊಂಡಿದೆ.