ಭಾರತೀಯ ಅತ್ಯಂತ ಖ್ಯಾತ ಅಂಬಾಸಿಡರ್ ಕಾರುಗಳ ಕಥೆ ಮುಗಿದೇ ಹೋಯಿತು ಎಂದುಕೊಳ್ಳುತ್ತಿದ್ದವರಿಗೆ ಒಂದು ಸಿಹಿ ಸುದ್ದಿ ಬಂದಿದೆ. ಹೌದು, ಭಾರತೀಯ ರಸ್ತೆಗಳಲ್ಲಿ ಏಕಸ್ವಾಮ್ಯ ಹೊಂದಿದ್ದ ಅಂಬಾಸಿಡರ್ ಕಾರು ಮತ್ತೆ ಮಾರುಕಟ್ಟೆಗೆ ಬರುತ್ತಿದೆ. ಅಂಬಾಸಿಡರ್ ಕಾರು ತಯಾರಕ ಸಂಸ್ಥೆ ಹಿಂದೂಸ್ತಾನ್ ಮೋಟರ್ಸ್ ಭಾರತೀಯ ಮಾರುಕಟ್ಟೆಗೆ ಮರಳಲು ಸಿದ್ಧತೆ ನಡೆಸಿದ್ದು, ಈ ಬಾರಿ ಎಲೆಕ್ಟ್ರಿಕ್ ರೂಪದಲ್ಲಿ ಅಂಬಾಸಿಡರ್ ಕಾರುಗಳು ರಸ್ತೆಗಿಳಿಯಲು ಸಜ್ಜಾಗಿವೆ. ಕಂಪನಿ ಈಗಾಗಲೇ ಯೂರೋಪ್ ಮೂಲದ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿ