ಹೈದರಾಬಾದ್: ವೈಎಸ್ ಆರ್ ಕಾಂಗ್ರೆಸ್ ಪಕ್ಷ ಸೇರಿದ ಒಂದೇ ವಾರಕ್ಕೆ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ಪಕ್ಷ ತೊರೆದು ಸುದ್ದಿಯಾಗಿದ್ದಾರೆ.ಸಾಮಾನ್ಯವಾಗಿ ರಾಜಕಾರಣಿಗಳು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ವಲಸೆ ಹೋಗುವುದು ಹೊಸತೇನಲ್ಲ. ಆದರೆ ಅಂಬಟಿ ರಾಯುಡು ಸೇರಿದ ಒಂದೇ ವಾರಕ್ಕೆ ಪಕ್ಷ ತೊರೆದಿದ್ದಾರೆ. ಸಿಎಂ ಜಗನ್ ರೆಡ್ಡಿ ಸಮ್ಮುಖದಲ್ಲಿ ಕಳೆದ ವಾರವಷ್ಟೇ ಅವರು ವೈಎಸ್ ಆರ್ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು.ಇದೀಗ ಸೋಷಿಯಲ್ ಮೀಡಿಯಾದಲ್ಲಿ ಪಕ್ಷ ತೊರೆಯುತ್ತಿರುವುದಾಗಿ ಸಂದೇಶ ಬರೆದಿದ್ದಾರೆ. ಅವರು ಗುಂಟೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂದು ಊಹಾಪೋಹಗಳಿತ್ತು.