ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಅವರು ಹೇಳುವ ಮೂಲಕ ರಾಜ್ಯ ಬಿಜೆಪಿ ನಾಯಕತ್ವದಲ್ಲಿ ಗೊಂದಲ ಇಲ್ಲವೆಂದು ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಈ ಮೂಲಕ ಯಡಿಯೂರಪ್ಪ ನಂತರವೂ ಲಿಂಗಾಯತರಿಗೆ ರಾಜ್ಯ ಬಿಜೆಪಿ ನೇತೃತ್ವ ಎನ್ನುವುದು ನಿಚ್ಚಳವಾಗಿದೆ. ದಾವಣಗೆರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅಮಿತ್ ಶಾ, ತಮ್ಮ ಭಾಷಣದುದ್ದಕ್ಕೂ ಬಿಜೆಪಿ ನಾಯಕ ಯಡಿಯೂರಪ್ಪ ಅವರನ್ನು