ನವದೆಹಲಿ: ಪಾಕ್ ಆಕ್ರಮಿತ ಕಾಶ್ಮಿರದಲ್ಲಿ ನಡೆದ ಸೀಮಿತ ದಾಳಿಯ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರುತ್ತಿವೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿರುವ ಆಪ್, ಅಮಿತ್ ಶಾ ಅಪರಾಧ ಹಿನ್ನೆಲೆಯ ವ್ಯಕ್ತಿ ಎನ್ನುವುದು ದೇಶಕ್ಕೆ ಗೊತ್ತಿದೆ. ಇದೀಗ ಅವರು ದೇಶಭಕ್ತಿಯ ಪಾಠ ಕಲಿಸುತ್ತಿದ್ದಾರೆ ಎಂದು ಕಿಡಿಕಾರಿದೆ.