ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲುವು ಸಾಧಿಸುವ ಮೂಲಕ ಕರ್ನಾಟಕದಲ್ಲಿ ಬಿಜೆಪಿ ಅರಳಿಸಲು ಮುಂದಾಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯ ಬಿಜೆಪಿ ಘಟಕದೊಳಗೆ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಹದ್ದಿನ ಕಣ್ಣಿಟ್ಟಿದ್ದು ಪ್ರತಿದಿನದ ಚಟುವಟಿಕೆಯ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ. ಪ್ರತಿದಿನದ ಮಾಹಿತಿ ಸಂಗ್ರಹಿಸಲು ಅಮಿತ್ ಶಾ ಅವರು ತಮ್ಮ ಪರಮಾಪ್ತ ಸಿಬ್ಬಂದಿಯೊಬ್ಬರನ್ನು ಬಿಜೆಪಿ ಕಚೇರಿಯಲ್ಲಿ ನೇಮಿಸಿದ್ದಾರೆ. ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಅಧ್ಯಕ್ಷತೆಯಲ್ಲಿ