ರಾಷ್ಟ್ರಪಿತ ಮಹಾತ್ಮಾಗಾಂಧಿಯವರ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತಮ್ಮ ಹೇಳಿಕೆಯನ್ನು ಹಿಂಪಡೆದು ದೇಶದ ಕ್ಷಮೆಯಾಚಿಸಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ. ಅಮಿತ್ ಶಾ ಉದ್ದೇಶಪೂರ್ವಕವಾಗಿ ಮಹಾತ್ಮಾ ಗಾಂಧಿ ಕುರಿತಂತೆ ಹೇಳಿಕೆ ನೀಡಿರುವುದು ದುರದೃಷ್ಟಕರ ಮತ್ತು ಅನೈತಿಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಾಂಧೀಜಿಯವರು ರಾಷ್ಟ್ರದ ಪಿತಾಮಹರಾಗಿದ್ದಾರೆ ಮತ್ತು ಅವರು ಪ್ರಪಂಚದ ಐಕಾನ್ ಆಗಿದ್ದಾರೆ, ಕೇವಲ ಅಧಿಕಾರದಲ್ಲಿದ್ದೇವೆ ಎಂದ