ನವದೆಹಲಿ: ಬಿಜೆಪಿ ಅಧ್ಯಕ್ಷರಾದ ಅಮಿತ್ ಷಾ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅರುಣ್ ಜೇಟ್ಲೆ ಅವರ ಜೊತೆಗೆ ರಾಜ್ಯಸಭೆಯಲ್ಲಿ ಮುಂಬದಿಯ ಆಸನಗಳಲ್ಲಿ ಸೇರ್ಪಡೆಗೊಳ್ಳುವ ಮೂಲಕ ರಾಜ್ಯಸಭೆಯಲ್ಲಿನ ಎನ್ಡಿಎ ಧ್ವನಿಯನ್ನು ಇನ್ನಷ್ಟು ಬಲಿಷ್ಠಗೊಳಿಸಲಿದ್ದಾರೆ.