ಆನಂದಿ ಬೆನ್ ಅವರ ರಾಜೀನಾಮೆಯಿಂದ ತೆರವಾಗಿರುವ ಗುಜರಾತ್ ಸಿಎಂ ಸ್ಥಾನಕ್ಕೆ ಯಾರು ಬರುತ್ತಾರೆ ಎಂಬ ಕುತೂಹಲ ದೇಶದಾದ್ಯಂತ ಮನೆ ಮಾಡಿದೆ. ಕೇಂದ್ರ ಸಚಿವ ಪುರುಷೋತ್ತಮ್ ರೂಪಾಲಾ, ಗುಜರಾತ್ ಸಂಪುಟ ದರ್ಜೆ ಸಚಿವ ನಿತಿನ್ ಪಟೇಲ್, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಯ್ ರೂಪಾನಿ, ವಿಧಾನಸಭಾ ಸ್ಪೀಕರ್ ಗಣಪತಿ ವಾಸವ್ ಮುಖ್ಯಮಂತ್ರಿ ಪದವಿಯ ರೇಸ್ನಲ್ಲಿದ್ದಾರೆ. ಆದರೆ ಮೂಲಗಳ ಪ್ರಕಾರ ವಿಜಯ್ ರೂಪಾನಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರೇ ಗುಜರಾತ್ ಸಿಎಂ ಆಗುವ ಲಕ್ಷಣಗಳು ದಟ್ಟವಾಗಿವೆ.