ನವದೆಹಲಿ: 2019 ರ ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿನಿಂದಲೇ ತಯಾರಿ ಶುರು ಮಾಡಿವೆ. ಬಿಜೆಪಿ ಮತ್ತು ಕಾಂಗ್ರೆಸ್ ದೆಹಲಿಯಲ್ಲಿ ಪ್ರತ್ಯೇಕ ಸಮಾಲೋಚನೆ ಸಭೆ ನಡೆಸಿದೆ. ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ನಿನ್ನೆ ದೆಹಲಿಯಲ್ಲಿ ಸಭೆ ಸೇರಿತ್ತು. ಈ ವೇಳೆ ಅಮಿತ್ ಶಾ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹೇಗಾದರೂ ಸರಿಯೇ 360 ಸೀಟು ಗೆಲ್ಲಲು ಗುರಿ ನಿಗದಿಪಡಿಸಿದ್ದಾರೆ.ಕಾಂಗ್ರೆಸ್ ತನ್ನ 17 ಮಿತ್ರ ಪಕ್ಷಗಳೊಂದಿಗೆ ಸಮಾಲೋಚನೆ ಸಭೆ ನಡೆಸಿದ ಬೆನ್ನಲ್ಲೇ