ನವದೆಹಲಿ: ನಮ್ಮ ಸರ್ಕಾರಕ್ಕೆ ಭ್ರಷ್ಟಾಚಾರದ ಕಳಂಕವಿಲ್ಲ ಎಂದು ಎದೆತಟ್ಟಿಕೊಳ್ಳುತ್ತಿದ್ದ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆಯುವಂತಹ ಆರೋಪವೊಂದನ್ನು ವೆಬ್ ವಾಹಿನಿಯೊಂದು ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರ ಕಂಪನಿಯ ವಹಿವಾಟು ಒಂದೇ ವರ್ಷದಲ್ಲಿ 16 ಸಾವಿರ ಪಟ್ಟು ಹೆಚ್ಚಾಗಿದೆ ಎಂಬ ಆರೋಪ ಕೇಳಿಬಂದಿದೆ. ವೆಬ್ ವಾಹಿನಿಯೊಂದು ಮಾಡಿರುವ ಆರೋಪವು ವಿರೋಧ ಪಕ್ಷಗಳಾದ ಕಾಂಗ್ರೆಸ್, ಎಎಪಿ ಮತ್ತು ಸಿಪಿಐ ಕೈಗೆ ಅಸ್ತ್ರ ಸಿಕ್ಕಂತಾಗಿದೆ.ನಷ್ಟದಲ್ಲಿ