ನವದೆಹಲಿ : ಉಕ್ರೇನ್ ಮೇಲೆ ರಷ್ಯಾದ ಸಂಭವನೀಯ ಆಕ್ರಮಣದ ಭೀತಿ ಹೆಚ್ಚಿದೆ. ಹೀಗಾಗಿ ಆತಂಕವಿರುವ ಪ್ರದೇಶಗಳಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳನ್ನು ವಾಪಸ್ ಕರೆಸಿಕೊಳ್ಳಲು ಟಾಟಾ ಒಡೆತನದ ಏರ್ ಇಂಡಿಯಾ ಇಂದು ರಾತ್ರಿ ಉಕ್ರೇನ್ ತಲುಪಲಿದೆ.ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ಪ್ರಜೆಗಳನ್ನು ವಾಪಸ್ ಕರೆಸಿಕೊಳ್ಳಲು ಭಾರತ ಸರ್ಕಾರ ಮುಂದಾಗಿದೆ. ಉಕ್ರೇನ್ನಲ್ಲಿ ನೆಲೆಸಿರುವ ಭಾರತೀಯರು ಸುರಕ್ಷಿತವಾಗಿ ಹಿಂದಿರುಗಲು ಈಗಾಗಲೇ ನೋಂದಾಯಿಸಿಕೊಂಡಿದ್ದಾರೆ.ಏರ್ ಇಂಡಿಯಾದ ಎಐ-1946 ಮೊದಲ ವಿಶೇಷ ವಿಮಾನದಲ್ಲಿ ಭಾರತೀಯ ಪ್ರಜೆಗಳು ಇಂದು ರಾತ್ರಿ