ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಉರುಳಿ 11 ಜನರು ದುರ್ಮರಣವನ್ನಪ್ಪಿದ ದಾರುಣ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಮುಳಪ್ಪಾಡು ಬಳಿ ನಡೆದಿದೆ. ಈ ದುರ್ಘಟನೆಯಲ್ಲಿ 17 ಜನರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ವಿಜಯವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ನಾಲ್ಕು ಜನರ ಪರಿಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ. ರಾಷ್ಟ್ರೀಯ ಹೆದ್ದಾರಿ 9 ರಲ್ಲಿ ಮುಂಜಾನೆ 7.30ರಿಂದ 8ಗಂಟೆ ಸಮಯದಲ್ಲಿ ಈ ದುರ್ಘಟನೆ ನಡೆದಿದ್ದು