ಹೈದರಾಬಾದ್ : ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್. ಶರ್ಮಿಳಾ ಅವರನ್ನು ವಾರಂಗಲ್ನಲ್ಲಿ ಪೊಲೀಸರು ಬಂಧಿಸಿದ್ದಾರೆ.ತೆಲಂಗಾಣದಲ್ಲಿ ಶರ್ಮಿಳಾ ಅವರು ವೈಎಸ್ಆರ್ ತೆಲಂಗಾಣ ಪಕ್ಷವನ್ನು ಸಂಘಟಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪಾದಾಯಾತ್ರೆಯನ್ನು ಹಮ್ಮಿಕೊಂಡಿದ್ದರು.ಅಷ್ಟೇ ಅಲ್ಲದೇ ಈವರೆಗೆ ಸುಮಾರು 3,500 ಕಿ.ಮೀವರೆಗೆ ಪಾದಯಾತ್ರೆ ನಡೆಸಿದ್ದರು. ನಿನ್ನೆ ನರಸಂಪೇಟೆಯಲ್ಲಿದ್ದ ಅವರು ಸ್ಥಳೀಯ ಟಿಆರ್ಎಸ್ ಶಾಸಕ ಪೆದ್ದಿ ಸುದರ್ಶನ್ ರೆಡ್ಡಿ ಅವರನ್ನು ಟೀಕಿಸಿದರು. ಇದರಿಂದಾಗಿ ಕೋಪಗೊಂಡ ಟಿಆರ್ಎಸ್ ಕಾರ್ಯಕರ್ತರು ಶರ್ಮಿಳಾ ಅವರ