ಅಮರಾವತಿ : ಸಾರ್ವಜನಿಕ ಸುರಕ್ಷತೆಯ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಸರ್ಕಾರವು ಹೆದ್ದಾರಿ ಸೇರಿದಂತೆ ರಸ್ತೆಗಳಲ್ಲಿ ಸಾರ್ವಜನಿಕ ಸಭೆಗಳನ್ನು ಹಾಗೂ ರ್ಯಾಲಿಗಳನ್ನು ನಡೆಸುವುದನ್ನು ನಿಷೇಧಿಸಿದೆ.ಕಳೆದ ವಾರ ಕಂದುಕೂರಿನಲ್ಲಿ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ನಡೆಸಿದ್ದ ರ್ಯಾಲಿ ವೇಳೆ ನೂಕುನುಗ್ಗಲು ಉಂಟಾಗಿತ್ತು. ಈ ವೇಳೆ ಕಾಲ್ತುಳಿತಕ್ಕೆ 11 ಮಂದಿ ಸಾವನ್ನಪ್ಪಿದ್ದರು. ಈ ಬೆನ್ನಲ್ಲೇ ಆಂಧ್ರ ಸರ್ಕಾರ ನಿಷೇಧಾಜ್ಞೆಯನ್ನು ಜಾರಿಗೆ ತಂದಿದೆ.ಈ ಬಗ್ಗೆ ರಾಜ್ಯ ಗೃಹ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಹರೀಶ್