ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ಬಿಜೆಪಿಗೆ ನೋ ಎಂದಿದ್ದಾರೆ. ಆಮ್ ಆದ್ಮಿ ಪಕ್ಷದ ವಿರುದ್ಧ ಬಿಜೆಪಿ ದೆಹಲಿಯಲ್ಲಿ ಹಮ್ಮಿಕೊಂಡಿರುವ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಮುಖಂಡರು ಪತ್ರ ಬರೆದಿದ್ದರು. ಆದರೆ ಬಿಜೆಪಿ ಪತ್ರಕ್ಕೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ನೋ ಎಂದಿದ್ದಾರೆ.ರಾಜಕೀಯ ಪಕ್ಷಗಳಿಂದ ದೇಶವು ಉಜ್ವಲವಾಗಿ ಭವಿಷ್ಯ ರೂಪಿಸಿಕೊಳ್ಳುತ್ತದೆ ಎಂಬುದಾಗಿ ತಮಗೆ ನಂಬಿಕೆ ಇಲ್ಲ ಎಂದಿರುವ ಅಣ್ಣಾ ಹಜಾರೆ, ಬಿಜೆಪಿಯ ಮನವಿಯನ್ನು ತಿರಸ್ಕರಿಸಿದ್ದಾರೆ.