ನವದೆಹಲಿ: ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಗಾಂಧಿವಾದಿ ಅಣ್ಣಾ ಹಜಾರೆ, ಕೇಂದ್ರದ ಎನ್ ಡಿಎ ನೇತೃತ್ವದ ಸರ್ಕಾರದ ವಿರದ್ಧ ವಾಗ್ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇವೆಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರ ಈಗ ಉದ್ದೇಶ ಮರೆತು ವರ್ತಿಸುತ್ತಿದೆ. ಲೋಕಪಾಲ ಮಸೂದೆಯನ್ನು ಜಾರಿಗೆ ಇದುವರೆಗೆ ತಂದಿಲ್ಲ ಎಂದು ಅಣ್ಣಾ ಹಜಾರೆ ವಾಗ್ದಾಳಿ ನಡೆಸಿದ್ದಾರೆ.ಕೆಲವು ದಿನಗಳ ಮೊದಲು ಪ್ರಧಾನಿ ಮೋದಿ ತಮ್ಮ ಪತ್ರಕ್ಕೆ ಉತ್ತರಿಸದ ದುರಹಂಕಾರಿ ಎಂದು ಅಣ್ಣಾ ಹಜಾರೆ ಜರೆದಿದ್ದರು.