ನವದೆಹಲಿ : ಕರ್ನಾಟಕದ ಸಿಂಗಂ ಎನಿಸಿಕೊಂಡ ಖ್ಯಾತ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇಂದು ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ದೆಹಲಿ ತಲುಪಿರುವ ಅಣ್ಣಾಮಲೈ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.2021ರ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಅಣ್ಣಾಮಲೈ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ತಮಿಳುನಾಡಿಗೆ ಈಗ ಪರ್ಯಾಯ ಆಡಳಿತದ ಅಗತ್ಯವಿದೆ. ಆ ಮಾರ್ಗವನ್ನು