ನವದೆಹಲಿ : ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ಉಂಟಾಗಿದೆ, ಹಿರಿಯ ನಾಯಕರಿಬ್ಬರು ಕಾಂಗ್ರೆಸ್ ತೊರೆಯಲು ಮುಂದಾಗಿದ್ದಾರೆ. ಕೇರಳ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ವಿ.ಎಂ. ಸುಧೀರನ್ ಎಐಸಿಸಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪಕ್ಷ ತೊರೆಯುವ ಬಗ್ಗೆ ಮಾತನಾಡಿದ್ದಾರೆ. ಎರಡು ದಿನಗಳ ಹಿಂದೆ ಕೇರಳ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅವರು ಎಐಸಿಸಿ ಸದಸ್ಯ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಅಸಮಾಧಾನ