ಭುವನೇಶ್ವರ : ಒಡಿಶಾದ ಬಾಲಸೋರ್ ನಲ್ಲಿ ನಡೆದ ರೈಲು ದುರಂತದ ಬೆನ್ನಲ್ಲೇ ಇದೀಗ ಮತ್ತೊಂದು ರೈಲು ಹಳಿ ತಪ್ಪಿದೆ. ಬರ್ಗರ್ ಜಿಲ್ಲೆಯಲ್ಲಿ ಸುಣ್ಣದ ಕಲ್ಲು ಸಾಗಿಸುತ್ತಿದ್ದ ಗೂಡ್ಸ್ ಟ್ರೈನ್ ಹಳಿ ತಪ್ಪಿದೆ. ಈ ರೈಲಿನ ಐದು ಬೋಗಿಗಳು ಹಳಿ ತಪ್ಪಿದ್ದು, ಅದೃಷ್ಟವಶಾತ್ ಯಾವುದೇ ಸಾವು-ನೋವುಗಳ ಬಗ್ಗೆ ವರದಿಯಾಗಿಲ್ಲ.