ವಾಷಿಂಗ್ಟನ್ : ನ್ಯಾಯಾಂಗ ಸಂವಿಧಾನಕ್ಕೆ ಮಾತ್ರ ಉತ್ತರದಾಯಿಯೇ ಹೊರತು ರಾಜಕೀಯ ಪಕ್ಷಗಳಿಗೆ ಅಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಹೇಳಿದ್ದಾರೆ.ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಭಾರತೀಯ ಅಮೆರಿಕನ್ನರ ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ನ್ಯಾಯಾಂಗ ವ್ಯವಸ್ಥೆ ಕುರಿತಾಗಿ ರಾಜಕೀಯ ಪಕ್ಷಗಳು ನೀಡುತ್ತಿರುವ ಪರ-ವಿರೋಧದ ಹೇಳಿಕೆಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅಧಿಕಾರದಲ್ಲಿರುವ ಸರ್ಕಾರದ ಪ್ರತಿ ಕ್ರಿಯೆಯೂ ನ್ಯಾಯಾಂಗದ ಅನುಮೋದನೆಗೆ ಅರ್ಹ ಎಂದು ಭಾವಿಸುತ್ತವೆ. ವಿರೋಧ ಪಕ್ಷಗಳೂ ತಮ್ಮ ರಾಜಕೀಯ ಸ್ಥಾನ