ನವದೆಹಲಿ : ಆ್ಯಪಲ್ ಕಂಪನಿಯು ವೆಚ್ಚವನ್ನು ಕಡಿತಗೊಳಿಸುವ ಸಲುವಾಗಿ ತನ್ನ ಕಂಪನಿಯ ಕಾರ್ಪೊರೇಟ್ ವಿಭಾಗದ ಉದ್ಯೋಗಿಗಳ ಬೋನಸ್ಗಳನ್ನು ವಿಳಂಬಗೊಳಿಸಲು ನಿರ್ಧರಿಸಿದೆ ಹಾಗೂ ಹಲವು ಉದ್ಯೋಗಿಗಳ ಬೋನಸ್ ಕೂಡಾ ಕಡಿಮೆಗೊಳಿಸುತ್ತದೆ ಎಂದು ವರದಿಗಳು ತಿಳಿಸಿವೆ. ಈ ವರದಿಗಳು ನಿಜವಾದಲ್ಲಿ ಉದ್ಯೋಗಿಗಳ ಒಂದು ವರ್ಗಕ್ಕೆ ಮುಂದಿನ ತಿಂಗಳು ಬಡ್ತಿ ದೊರೆಯುವುದಿಲ್ಲ. ಉದ್ಯೋಗಿಗಳ ಕಾರ್ಯಕ್ಷಮತೆಯ ಆಧಾರದ ಮೇಲೆ ಕಂಪನಿಯು ವರ್ಷಕ್ಕೆ ಎರಡು ಬಾರಿ (ಎಪ್ರಿಲ್ ಮತ್ತು ಅಕ್ಟೋಬರ್) ತನ್ನ ಉದ್ಯೋಗಿಗಳಿಗೆ ಬೋನಸ್ ನೀಡುತ್ತದೆ.ಬಡ್ತಿ ಹಾಗು