ನವದೆಹಲಿ:ದೆಹಲಿ ರಾಜಧಾನಿ ವಲಯದಲ್ಲಿ ರಾಜ್ಯ ಸಭಾ ಚುನಾವಣೆಯನ್ನು ನಡೆಸಲು ಚುನಾವಣಾ ಆಯೋಗ ಮುಂದಾಗಿದ್ದು, ಅದಕ್ಕೂ ಮುನ್ನ ಕೇಜ್ರಿವಾಲ್ ಗೆ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಿಸಲಾಗಿದೆ. ಬುಧವಾರದಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದ್ದು, ಜ. 19 ರಂದು ಚುನಾವಣೆ ನಡೆಯಲಿದೆ. ಜಾರಿ ನಿರ್ದೇಶಾನಲಯವು ಆಮ್ ಆದ್ಮಿ ಪಕ್ಷದ ವರಿಷ್ಠ ಹಾಗೂ ದೆಹಲಿಯ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ. ಜ. 18 ರೊಳಗೆ ವಿಚಾರಣೆಗೆ ಹಾಜರಾಗಬೇಕೆಂದು ಇಡಿ ಸೂಚಿಸಿದೆ.