ಚೆನ್ನೈ : ಸಹಾಯಕ ಚಲನಚಿತ್ರ ನಿರ್ದೇಶಕಿಯೊಬ್ಬರು ತನ್ನ ಸ್ನೇಹಿತನೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಕಾರನ್ನು ನಿಲ್ಲಿಸಿದ್ದಕ್ಕೆ ಆತನನ್ನು ನಿಂದಿಸಿ ಹಲ್ಲೆ ಮಾಡಿದ ಘಟನೆ ಚೆನ್ನೈ ನಲ್ಲಿ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.